ಬೆಂಗಳೂರು(ಆ.04): ಕೇರಳ, ಮಹಾರಾಷ್ಟ್ರ ಸೇರಿದಂತೆ ಕೋವಿಡ್-19 ಸೋಂಕು ಹೆಚ್ಚಿರುವ ರಾಜ್ಯಗಳಿಂದ ಬೆಂಗಳೂರಿಗೆ ಬರುವ ಕೋವಿಡ್ ವರದಿ ನೆಗೆಟಿವ್ ಇಲ್ಲದ ಪ್ರಯಾಣಿಕರನ್ನು ಇನ್ನುಮುಂದೆ ಪಾಲಿಕೆ ಅಧಿಕಾರಿಗಳು ಕ್ವಾರಂಟೈನ್ಗೆ ಒಳಪಡಿಸಲಿದ್ದಾರೆ. ಗಡಿ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ಆರ್ಟಿ-ಪಿಸಿಆರ್ ಪರೀಕ್ಷೆ ವರದಿ ಕಡ್ಡಾಯ ಮಾಡಲಾಗಿದೆ. ಪ್ರಯಾಣಿಕರು 72 ಗಂಟೆಗಳ ಒಳಗೆ ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಂಡಿರಬೇಕು. ಪರೀಕ್ಷೆ ವರದಿ ತರದ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ ನೆಗೆಟಿವ್