ಬಿಸಿಲೂರಿನಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದ್ದು ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.ಕಲಬುರಗಿ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬಸ್ ನಿಲ್ದಾಣ ಹತ್ತಿರದಲ್ಲಿರುವ ಕಾವೇರಿ ಲಾಡ್ಜ್ ನ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ (30) ಕೊಲೆಯಾದವರಾಗಿದ್ದಾರೆ.ಮಲ್ಲಿಕಾರ್ಜುನನ ಜತೆ ಮಾತನಾಡುತ್ತಿರುವಂತೆ ನಟಿಸಿದ ಮೂವರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕುತ್ತಿಗೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಈ ಚಿತ್ರಣ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಬೆಳ್ಳಂಬೆಳಗ್ಗೆ ಅದು ಜನರು ಓಡಾಡುವ