ಮಡಿಕೇರಿ : ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು ಓರ್ವ ವಿದ್ಯಾರ್ಥಿ ಸಾವನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ತಿರುವಿನಲ್ಲಿ ನಡೆದಿದೆ. ಹತ್ತನೇ ತರಗತಿ ಬಸವರಾಜು ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಬಳ್ಳಾರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಹೊತ್ತ ಖಾಸಗಿ ಬಸ್ ಮಡಿಕೇರಿ ಪ್ರವಾಸಕ್ಕೆ ಬಂದಿದ್ದ ವೇಳೆ ಇಂದು ನಸುಕಿನ ಜಾವ 2.30ರ ವೇಳೆ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನು ಮಡಿಕೇರಿ ಆಸ್ಪತ್ರೆಗೆ