ಎತ್ತಿನ ಗಾಡಿಗೆ ಬಸ್ ಡಿಕ್ಕಿ; ಎತ್ತು ಹಾಗೂ ರೈತ ಇಬ್ಬರು ಸ್ಥಳದಲ್ಲೆ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

ಗದಗ| pavithra| Last Modified ಗುರುವಾರ, 27 ಫೆಬ್ರವರಿ 2020 (09:02 IST)
: ಎತ್ತಿನ ಗಾಡಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಹಾಗೂ ಇಬ್ಬರು ಸ್ಥಳದಲ್ಲೆ ಸಾವನಪ್ಪಿದ ಘಟನೆ ಗದಗ ತಾಲೂಕಿನ ಅಡವಿ ಸೋಮಾಪುರ ಬಳಿ ನಡೆದಿದೆ.


ಹನುಮಪ್ಪ ಮುಳ್ಳೂರು(75) ಮೃತಪಟ್ಟ ರೈತ, ಈತ ಜಮೀನಿನ ಕೆಲಸ ಮುಗಿಸಿಕೊಂಡು ಮರಳಿ ಮನೆಗೆ ಬರುತ್ತಿರುವಾಗ ಬಸ್ ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹನುಮಪ್ಪ ಮತ್ತು ಎತ್ತು ಸ್ಥಳದಲ್ಲೆ ಸಾವನಪ್ಪಿದೆ. ಎತ್ತಿನ ಗಾಡಿಯಲ್ಲಿದ್ದ ಇನ್ನಿಬ್ಬರು ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :