ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು ಆಯತಪ್ಪಿ ಹಳ್ಳಕ್ಕೆ ಬಿದ್ದಿದೆ.ಆರ್ ಕೆ ವಿದ್ಯಾ ಸಂಸ್ಥೆಯ ಬಸ್ ಒಂದು ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ಸಮಯದಲ್ಲಿ ಆಯತಪ್ಪಿ ಹಳ್ಳಕ್ಕೆ ಬಿದ್ದಿದೆ. ಮದ್ದೂರು ತಾಲ್ಲೂಕಿನ ಕೆ ಹೊನ್ನಲಗೆರೆ ಗ್ರಾಮದ ಹೊರಹೊಲಯದಲ್ಲಿ ಈ ಘಟನೆ ಸಂಭವಿಸಿದೆ. ಘಟನೆ ವೇಳೆ ಬಸ್ ನಲ್ಲಿ ನಲವತ್ತಕ್ಕೂ ಅಧಿಕ ಮಕ್ಕಳು ಇದ್ದರು. ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ ಮಗುವನ್ನು ಶಾಲೆಗೆ ಬಿಟ್ಟು ಬರುತ್ತಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.ಡಿ ಹೊಸುರು