ಅಪಘಾತಕ್ಕೀಡಾದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ೨ ಮಕ್ಕಳು ಸೇರಿ ೭ ಮಂದಿ ಸಜೀವದಹನಗೊಂಡ ಆಘಾತಕಾರಿ ಘಟನೆ ಕಲಬುರಗಿಯ ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಸಂಭವಿಸಿದೆ. ಗೋವಾದಿಂದ ಖಾಸಗಿ ಬಸ್ ಹೈದರಾಬಾದ್ ಗೆ ತೆರಳುತ್ತಿದ್ದಾಗ ಚಾಲಕನ ವೇಗದ ಅಜಾಗರೂಕತೆ ಚಾಲನೆಯಿಂದ ಬಸ್ ಪಲ್ಟಿಯಾಗಿ ಟೆಂಪೊಗೆ ಡಿಕ್ಕಿ ಹೊಡೆದಿದೆ. ಕಮಲಾಪುರ ಹೊರವಲಯದ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದೆ. ಬಸ್ ಟೆಂಪೊ ಅಪಘಾತದ ನಂತರ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿ ಉರಿಯಲು ಆರಂಭಿಸಿದೆ.