ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಘಟನೆಯಲ್ಲಿ ಚಾಲಕ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ.ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಾಣೂರು ಬಳಿ ಘಟನೆ ನಡೆದಿದೆ. ಗೊಬ್ಬರ ತುಂಬಿಕೊಂಡು ಚಿಕ್ಕಮಗಳೂರಿನಿಂದ ಅರಸೀಕೆರೆ ಗೆ ಹೋಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.