ಬೆಳ್ಳಂಬೆಳಗ್ಗೆ KSRTC ಬಸ್ ಒಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ವೀರ ಸೇನಾನಿ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿ ಬಿದ್ದಿದೆ. ಮಂಜಿನ ನಗರಿ ಮಡಿಕೇರಿಗೆ ಕಳಸದಂತೆ ಇದ್ದ ವೀರ ಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ನಿಯಂತ್ರಣ ಕಳೆದುಕೊಂಡ KSRTC ಬಸ್ ಡಿಕ್ಕಿಯಾಗಿ ಮಹಾನ್ ಸೇನಾನಿ ಪ್ರತಿಮೆ ನೆಲಕ್ಕುರುಳಿದೆ. ಮಡಿಕೇರಿ ಡಿಪೋದಿಂದ ಬಸ್ ನಿಲ್ದಾಣದ ಕಡೆ ಹೊರಟಿದ್ದ ಬಸ್ಗೆ ಪಿಕಪ್ ವಾಹನವೊಂದು ಅಡ್ಡ ಬಂದಿದ್ದು, ಅಪಘಾತ