ನಾಲ್ಕನೇ ಹಂತದ ಲಾಕ್ ಡೌನ್ ನಡುವೆ ಈ ಜಿಲ್ಲೆಯಿಂದಲೂ ಬಸ್ ಸಂಚಾರ ಆರಂಭಗೊಂಡಿದೆ. ಕೆಲವು ಮುನ್ನೆಚ್ಚರಿಕಾ ಕ್ರಮಗಳ ನಡುವೆ ಉತ್ತರಕನ್ನಡ ಜಿಲ್ಲೆಯಲ್ಲಿಯೂ ಬಸ್ ಸಂಚಾರ ಆರಂಭವಾಗಿದೆ. ಸುಮಾರು 58 ದಿನಗಳ ನಂತರ ಬಸ್ ಸಂಚಾರ ಪುನರಾರಂಭವಾದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಮೊದಲ ಬಸ್ ತೆರಳುವ ಮುನ್ನ ಚಪ್ಪಾಳೆ ತಟ್ಟಿ ಶುಭ ಹಾರೈಸಿದರು.ಕಾರವಾರದಿಂದ ಹುಬ್ಬಳ್ಳಿಗೆ ಬೆಳಗ್ಗೆ 9 ಗಂಟೆಗೆ ಮೊದಲ ಬಸ್ ಸಂಚಾರ ಆರಂಭಿಸಿತು. ಬಸ್ ಪ್ರಯಾಣ ಆರಂಭಿಸುವ ಮುನ್ನ