ರೈತರಿಂದ ಪ್ರತಿ ಕ್ವಿಂಟಲ್ಗೆ 3399ರೂ.ಗಳ ಬೆಂಬಲ ಬೆಲೆಯಲ್ಲಿ ಸೋಯಾಬೀನ್ ಖರೀದಿಗಾಗಿ ಒಟ್ಟು 7 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಕಲಬುರಗಿ ತಾಲೂಕಿನ ಮಹಾಗಾಂವ. ಆಳಂದ ತಾಲೂಕಿನ ಖಜೂರಿ, ಮಾದನಹಿಪ್ಪರಗಾ, ನಿಂಬರ್ಗಾ ಹಾಗೂ ಚಿಂಚೋಳಿ ತಾಲೂಕಿನ ಚಿಮ್ಮನಚೋಡ, ಕೋಡ್ಲಿ, ಐನೋಳ್ಳಿ ಗ್ರಾಮಗಳಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ರೈತರು 2018ರ ನವೆಂಬರ್ 24ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅದೇ ರೀತಿ ಈ ಹಿಂದೆ ಉದ್ದಿನಕಾಳು