ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಅಳಿವು ಉಳಿವಿನ ಪ್ರಶ್ನೆಯಾಗಿರುವ ಉಪ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಕಾರ್ಯ ಸಾಗುತ್ತಿದೆ. ಆರಂಭಿಕ ಹಂತದಲ್ಲಿ ಆಡಳಿತಾರೂಢ ಬಿಜೆಪಿ ಮುನ್ನಡೆ ಸಾಧಿಸಿದೆ.11 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ, ಕಾಂಗ್ರೆಸ್ 2 ಮತ್ತು ಜೆಡಿಎಸ್ 1 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಅದರಲ್ಲೂ ಯಲ್ಲಾಪುರದಲ್ಲಿ ಬಿಜೆಪಿ ಶಿವರಾಜ್ ಹೆಬ್ಬಾರ್ 47 ಸಾವಿರ ಮತಗಳ ಮುನ್ನಡೆಯಲ್ಲಿದ್ದು ಗೆಲುವಿನ ನಗೆ ಬೀರುವ ಮೊದಲ ಅಭ್ಯರ್ಥಿ ಎನಿಸಿಕೊಳ್ಳುವ ಲಕ್ಷಣ ಕಾಣುತ್ತಿದೆ.ಕೆಆರ್ ಪುರಂನಲ್ಲಿ ಬಿಜೆಪಿಯ