ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ ಈ ತಿಂಗಳೊಳಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾತನಾಡಿದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಈ ತಿಂಗಳೊಳಗೆ ಆಗಲಿದೆ. ಶೀಘ್ರವೇ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು. ಪಕ್ಷದ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಯಾವುದೇ