ಬೆಂಗಳೂರು : ನೂತನ ಸಂಸದರಾದ ಬಿ.ವೈ.ರಾಘವೇಂದ್ರ ಅವರು ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬಿ.ವೈ.ರಾಘವೇಂದ್ರ ಅವರು ಇಂದು ಬೆಂಗಳೂರಿನ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ ಉಭಯ ನಾಯಕರ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿದ ಬಿ.ವೈ.ರಾಘವೇಂದ್ರ ಅವರು, ನಮ್ಮ ಕ್ಷೇತ್ರಕ್ಕೆ 6 ನೀರಾವರಿ ಯೋಜನೆಗಳು ಘೋಷಣೆಯಾಗಿವೆ, ಈ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿ ಟೆಂಡರ್ ಕರೆದು ಕಾಮಗಾರಿ