ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರೇ, ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಆದರಣೀಯ ನರೇಂದ್ರ ಮೋದಿಜೀ ರವರನ್ನು ಟೀಕಿಸುವ ಭರದಲ್ಲಿ ನೀವು ಇಂದು ದೇಶದ 140 ಕೋಟಿ ಜನರನ್ನು ಹಾಗೂ ನಮ್ಮ ಪ್ರಜಾಪ್ರಭುತ್ವದ ಘನತೆಯನ್ನು ಅಪಮಾನಿಸಿದ್ದೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇದು ಸತತ ಮೂರನೇ ಬಾರಿಗೆ ಮೋದಿಜೀ ರವರನ್ನು ಭಾರತದ ಪ್ರಧಾನಮಂತ್ರಿಗಳ ಸ್ಥಾನದಲ್ಲಿ ಕೂರಿಸಿರುವ ದೇಶದ ಜನತೆಯ ತೀರ್ಪಿಗೆ ನೀವು ನೀಡುತ್ತಿರುವ ಗೌರವವೇ?