ಬೆಂಗಳೂರು: ಶಾಸಕರಿಗೆ ಅನುದಾನ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿಬಂದಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಈಗ ಕಾಂಗ್ರೆಸ್ ಶಾಸಕರಿಗೆ 50 ಕೋಟಿ, ಬಿಜೆಪಿ ಶಾಸಕರಿಗೆ 25 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಆದರೆ ಬಿಜೆಪಿ ಶಾಸಕರಿಗೆ ಕಡಿಮೆ ಹಣ ನೀಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ ಕಿಡಿ ಕಾರಿದ್ದಾರೆ.ಈ ಬಗ್ಗೆ ಎಕ್ಸ್ ನಲ್ಲಿ ಸರ್ಕಾರವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ‘ಸಿದ್ದರಾಮಯ್ಯನವರೇ, ನೀವು ಕಾಂಗ್ರೆಸ್ ಶಾಸಕರಿಗೆ ಮುಖ್ಯಮಂತ್ರಿಯೋ ಅಥವಾ ಕರ್ನಾಟಕದ