ಕುಂದಗೋಳ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಕೈ ಪಾಳೆಯದಲ್ಲಿ ತೀವ್ರ ಪೈಪೋಟಿ ಕಂಡುಬರುತ್ತಿದೆ. ನಾನು ಆಕಾಂಕ್ಷಿ ಆಗಿದ್ದು, ಈ ಕಾರಣದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಚ್ಛಿಸಿದ್ದು ನಾನು ಕಾಂಗ್ರೆಸ್ ಟಿಕೆಟ್ ನ ಪ್ರಬಲ ಆಕಾಂಕ್ಷಿ ಎಂದು ಯಲ್ಲಪ್ಪ ಬಿಸೇರೊಟ್ಟಿ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ಮಾತನಾಡಿದ ಅವರು, ಮೇ 19 ರಂದು ಕುಂದಗೋಳ ಉಪಚುನಾವಣೆ ನಡೆಯಲಿದ್ದು, ನಾನು ಸ್ಪರ್ಧಿಸುವ ಆಸೆ ಹೊಂದಿದ್ದೇನೆ. ದಿ. ಮಾಜಿ ಮುಖ್ಯಮಂತ್ರಿಗಳಾದ ವಿರೇಂದ್ರ ಪಾಟೀಲ, ಎಸ್. ಬಂಗಾರಪ್ಪ, ಮಾಜಿ ವಿದೇಶಾಂಗ