ಪ್ರತಿಷ್ಠೆಯ ಕಣವಾಗಿದ್ದ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಮತ ಎಣಿಕೆಯ ಪ್ರತೀ ಹಂತದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡರು. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ದಿವಂಗತ ಎಚ್.ಎಸ್. ಮಹದೇವ ಪ್ರಸಾದ್ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವಪ್ರಸಾದ್, ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ನಿರಂಜನ್ ಕುಮಾರ್ ವಿರುದ್ಧ 10,877 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಇತ್ತ ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ತಮ್ಮ ಪ್ರತಿ ಸ್ಪರ್ಧಿ ವಿ. ಶ್ರೀನಿವಾಸಪ್ರಸಾದ್