ಉಪಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳಲ್ಲಿ ಚುನಾವಣೆ ಹೇಗೆ ನಡೆದಿದೆ ಎನ್ನುವುದು ಜನತೆಗೆ ತಿಳಿದಿದೆ. ಆದರೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಇಂತಹ ಅಕ್ರಮಗಳು ನಡೆಯಲು ಬಿಡುವುದಿಲ್ಲ ಎಂದರು. ಅಮಾನತುಗೊಂಡಿರುವ ಜೆಡಿಎಸ್ ಬಂಡಾಯ ಶಾಸಕರ ಬಗ್ಗೆ ಪಕ್ಷದ ಶಿಸ್ತು ಸಮಿತಿ ಶೀಘ್ರ ತೀರ್ಮಾನ ಕೈಗೊಳ್ಳಲಿದೆ ಎಂದರು.