ಹೊಸಕೋಟೆ : ಹೊಸಕೋಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಸಿಎಂ ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಾದ ಬಚ್ಚೇಗೌಡ ಹಾಗೂ ಅವರ ಪುತ್ರ ಶರತ್ ಬಚ್ಚೇಗೌಡರ ಹೆಸರು ಹೇಳದೆ ಅವರ ಬದ್ಧ ವೈರಿ ಎಂಟಿಬಿ ನಾಗರಾಜ್ ಬಗ್ಗೆ ಹಾಡಿಹೊಗಳಿದ್ದಾರೆ. ಇಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರವಾದ ಹೊಸಕೋಟೆಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ಜನರನ್ನುದ್ದೇಶಿ ಮಾತನಾಡುವಾಗ ಎಲ್ಲರ ಹೆಸರು ಪ್ರಸ್ತಾಪಿಸಿದ ಸಿಎಂ