ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಗೂಂಡಾಗಿರಿ ಪ್ರಕರಣ ದಾಖಲಾಗಿದೆ. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಭಾಮೈದನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ಮಧ್ಯರಾತ್ರಿ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ.ಮಿಥುನ್ ರೆಡ್ಡಿ ಎಂಬಾತ ತಿಪ್ಪೇಸ್ವಾಮಿ ಎಂಬ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಓವರ್ ಟೇಕ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ ಮಿಥುನ್ ರೆಡ್ಡಿ ತಾನು ಶಾಸಕ ಸತೀಶ್ ರೆಡ್ಡಿ ಭಾಮೈದ ಎಂದು ಈ ವೇಳೆ ಧಮಕಿ ಹಾಕಿದ್ದ