ಮುಂಗಾರು ಅಧಿವೇಶನ ಮುಕ್ತಾಯವಾದ ಕೂಡಲೇ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಂಬರುವ ಜೂನ್ 16 ರವರೆಗೆ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಜೂನ್ 16 ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಬಲ್ಲ ಮೂಲಗಳ ಪ್ರಕಾರ, ಜೂನ್ 18 ಅಥವಾ 19 ರಂದು ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ. ಬಹುತೇಕ ಜೂನ್ 20 ರೊಳಗೆ ಸಚಿವ ಸಂಪುಟ ವಿಸ್ತರಣೆ