ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಸಚಿವ ಸಂಪುಟದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ದೆಹಲಿಗೆ ಹೋದ ನಂತರ ಮಾತಾಡ್ತೀನಿ ಎಂದಿದ್ದಾರೆ ಎಂದು ಚುಟುಕಾಗಿ ಹೇಳಿದರು. ಈಗಾಗಲೇ ತಿಳಿಸಿರುವಂತೆ ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಪ್ರಸ್ತಾವನೆಗಳ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಶೇ.80 ಆದೇಶ ಹೊರಡಿಸಲಾಗಿದೆ. ಕಾನೂನು ಮತ್ತು ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಉಳಿದ ಶೇ.20ಕ್ಕೂ ಆದೇಶ ಪ್ರಕಟಿಸಲು ಕ್ರಮ