ಬೆಂಗಳೂರು (ಆ.10): ಕೋರೋನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕ್ಷಯ ರೋಗ ಪತ್ತೆಯಾಗುತ್ತಿರುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಮುಕ್ತರು ಮತ್ತು ಅವರ ಕುಟುಂಬ ಸದಸ್ಯರಿಗೆ ಕ್ಷಯರೋಗ ಪತ್ತೆ ಆಂದೋಲನ ನಡೆಸಲು ಸರ್ಕಾರ ನಿರ್ಧರಿಸಿದೆ. ಕೋವಿಡ್ ಸಾಂಕ್ರಾಮಿಕ ಕಾಣಿಸಿಕೊಂಡ ಬಳಿಕ ಕ್ಷಯರೋಗದ ಪತ್ತೆ ಪ್ರಮಾಣ ಕಡಿಮೆ ಆಗಿದ್ದರೂ ಕೂಡ ಕೋವಿಡ್ನಿಂದ ಚೇತರಿಸಿಕೊಂಡ ವ್ಯಕ್ತಿಗಳಲ್ಲಿ ಕನಿಷ್ಠ 24 ಮಂದಿಯಲ್ಲಿ ಕ್ಷಯ ರೋಗ ವರದಿಯಾಗಿದೆ. ಕೋವಿಡ್ನಿಂದ ಚೇತರಿಸಿಕೊಂಡವರಲ್ಲಿ ರೋಗ ನಿರೋಧಕತೆ ಕಡಿಮೆ ಇರುವುದು ಮತ್ತು ಕೋವಿಡ್ನಿಂದ