ಒಂದು ಪಕ್ಷದ ಚುನಾಯಿತ ಪ್ರತಿನಿಧಿಗಳಿಗೆ ಆಸೆ- ಆಮಿಷಗಳನ್ನು ಒಡ್ಡುವುದು ಸರಿಯಲ್ಲ. ನಮ್ಮ ಪಕ್ಷದ ಜನಪ್ರತಿನಿಧಿಗಳು ಇಂತಹ ಆಮಿಷಗಳಿಗೆ ಬಲಿಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಸರಕಾರ ಬದಲಾಗುವುದಿಲ್ಲ. ಹೀಗಂತ ಸಂಸದರೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದಲ್ಲಿ ಸಂಸದ ಆರ್.ದೃವನಾರಾಯಣ್ ಹೇಳಿಕೆ ನೀಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ. 4, 5 ಜನ ಯಾರು ಹೊರಗೆ ಹೋಗಿದ್ದಾರೆಯೋ ಅವರೆ ಅತೃಪ್ತ ಶಾಸಕರು. ಅವರನ್ನ ಈಗಾಗಲೇ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದರು.ಎಲ್ಲರಿಗೂ ಮಂತ್ರಿಯಾಗುವ ಆಸೆ ಇದ್ದೇ ಇರುತ್ತದೆ.