ಪ್ರಗತಿಪರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಆರ್.ಆರ್.ಎಸ್ ಸಂಘಟನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಆರ್.ಎಸ್.ಎಸ್ ಸಂಘಟನೆಯನ್ನು ವಿರೋಧಿಸುತ್ತಾ ಬಂದಿರುವ ಬಳಗದಲ್ಲಿದ್ದ ನಾಗತಿಹಳ್ಳಿ ಚಂದ್ರಶೇಖರ್ ಅದು ಹೇಗೆ ಕಾರ್ಯಕ್ರಮವನ್ನು ಒಪ್ಪಿಕೊಂಡರು ಎನ್ನುವುದು ಕೆಲವರ ಪ್ರಶ್ನೆಯಾಗಿತ್ತು. ಬೆಂಗಳೂರಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶಂಕರಪುರ ಭಾಗ ಜುಲೈ 16ರಂದು ‘ಶ್ರೀ ಗುರು ಪೂಜಾ ಉತ್ಸವ’ವನ್ನು ಆಯೋಜನೆ ಮಾಡಿತ್ತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಗತಿಹಳ್ಳಿ ಚಂದ್ರಶೇಖರ್