ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯಾಗಿ ಒಂದು ತಿಂಗಳು ಕಳೆದ ಬೆನ್ನಲ್ಲೇ ಕೆಲವು ಸುದ್ದಿ ವಾಹಿನಿಗಳಲ್ಲಿ ಹಂತಕರು ಕೆಲವು ಸಂಘಟನೆಗೆ ಸೇರಿದವರು ಎಂದು ವರದಿಯಾಗಿತ್ತು. ಈ ಬಗ್ಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಗೌರಿ ಲಂಕೇಶ್ ಹಂತಕರ ಬಗ್ಗೆ ಸುಳಿವು ಸಿಕ್ಕಿರುವುದು ನಿಜ. ಆದರೆ ಎಸ್ಐಟಿ ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದೆ. ಕೆಲವು ಸಂಘಟನೆಯ ಮೇಲೆ ಅನುಮಾನವಿರುವುದು ನಿಜ ಎಂದು ಸಚಿವರು