ಚಿಕ್ಕಬಳ್ಳಾಪುರದ ರಾಮದೇವರ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಾಗೂ ನಾಲ್ವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿಂತಿದ್ದ ಬೈಕ್, ಕಾರುಗಳಿಗೆ ಕ್ಯಾಂಟರ್ ಡಿಕ್ಕಿಹೊಡೆದು ರಾಮದೇವರಗುಡಿ ಪ್ರಣವ್ ಹೋಟೆಲ್ಗೆ ನುಗ್ಗಿದೆ. ಹೆದ್ದಾರಿಯಿಂದ ಹೋಟೆಲ್ಗೆ ಕ್ಯಾಂಟರ್ ನುಗ್ಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಹೋಟೆಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ ಬೈಕ್ ಸವಾರ ಜನಾರ್ಧನ ಮೃತಪಟ್ಟಿದ್ದಾರೆ. ಅಲ್ಲದೆ ಬಾಣಂತಿಗೆ ಗಂಭೀರ