Widgets Magazine

ಮಕರ ಸಂಕ್ರಾಂತಿ ಕರಿ ಎಫೆಕ್ಟ್ : ಸಾಹಿತ್ಯ ಸಮ್ಮೇಳನದ ಗುದ್ದಲಿ ಪೂಜೆ ಮುಂದೂಡಿಕೆ

ಕಲಬುರಗಿ| Jagadeesh| Last Modified ಗುರುವಾರ, 16 ಜನವರಿ 2020 (15:35 IST)
ಮಕರ ಸಂಕ್ರಾಂತಿ ಕರಿ ಎಫೆಕ್ಟ್ ಈ ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೂ ಬಿದ್ದಿದೆ. ಹೀಗಾಗಿ ಗುದ್ದಲಿ ಪೂಜೆ ದಿನ ಮುಂದಕ್ಕೆ ಹೋಗಿದೆ.  


ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5, 6 ಮತ್ತು 7 ರಂದು ಜರುಗಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗುತ್ತಿದೆ. ಜನೇವರಿ 17 ರಂದು ಬೆಳಿಗ್ಗೆ 11.30 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗುತ್ತದೆ ಎಂದು 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕರಾಗಿರುವ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಈ ಹಿಂದೆ ವೇದಿಕೆ ನಿರ್ಮಾಣ ಕಾರ್ಯಕ್ಕೆ ಜನೇವರಿ 16 ರಂದು ಗುದ್ದಲಿ ಪೂಜೆ ನೆರವೇರಿಸಲು ನಿರ್ಧರಿಸಲಾಗಿತ್ತು.

ಕಾರಣಾಂತರದಿಂದ ಜನೇವರಿ 17ಕ್ಕೆ ಮುಂದೂಡಲಾಗಿದೆ. ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸಾಹಿತಿಗಳು ಮುಂತಾದವರು ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :