ದಾಂಧಲೆ ನಿರತವಾಗಿರುವ ಕಾಡಾನೆಗಳನ್ನು ಸೆರೆ ಹಿಡಿಯಲು ಸಕಾ೯ರ ಅನುಮತಿ ನೀಡಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನಲ್ಲಿ 2 ಹಾಗೂ ಮಡಿಕೇರಿ ವಿಭಾಗದಲ್ಲಿ 2 ಕಾಡಾನೆಗಳು ಸೇರಿದಂತೆ ದಾಂಧಲೆನಿರತವಾಗಿರುವ ಒಟ್ಟು 4 ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಅನುಮತಿ ನೀಡಿದೆ.ಹೀಗಂತ ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಲಾಲ್ ತಿಳಿಸಿದ್ದಾರೆ.ಕೊಡಗಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳು ಕಾಫಿ ತೋಟದಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಿದ್ದು, ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿವೆ.ಉಪಟಳ ನೀಡುವ ಆನೆಗಳನ್ನು ಸೆರೆ ಹಿಡಿದು ಸ್ಥಳಾಂತರಗೊಳಿಸಲು