ಮೊದಲ ದಿನ ಕೆಲಸಕ್ಕೆ ಹೋಗುತ್ತಿದ್ದ ಮಗನನ್ನು ಅಪ್ಪ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಇಬ್ಬರೂ ಮೃತಪಟ್ಟ ಆಘಾತಕಾರಿ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ಗೇಟ್ ಬಳಿ ಭಾನುವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನರಸಿಂಹರಾಜ್ (56) ಹಾಗೂ ಕಿರಣ್ (23) ಮೃತಪಟ್ಟ ದುರ್ದೈವಿಗಳು. ಕಾರಿನಲ್ಲಿದ್ದ ತಾಯಿ ಭಾರತಿ (52) ಹಾಗೂ ಪ್ರೇರಣಾ (19)