ಹೋಳಿ ಹುಣ್ಣಿಮೆ ಹಬ್ಬವನ್ನು ರಾಜ್ಯದ ಹಲವೆಡೆ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಅತ್ಯಂತ ಶ್ರದ್ದಾಭಕ್ತಿ ಹಾಗೂ ಸಡಗರ ಮತ್ತು ಸಂಭ್ರಮಗಳಿಂದ ಆಚರಿಸಲಾಯಿತು.ಹೋಳಿಹುಣ್ಣಿಮೆ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲೂಕು ಬಾರ್ಲಹಳ್ಳಿ ಯ ಶ್ರೀಯೋಗ ಜಾಲಾರಿ ಲಕ್ಷ್ಮಿನರಸಿಂಹ ದೇವಾಲಯದಲ್ಲಿ ಕಲ್ಯಾಣೋತ್ಸವ ಮತ್ತು ರಥೋತ್ಸವ ನಡೆಯಿತು. ವಿವಿಧೆಡೆಗಳಿಂದ ಆಗಮಿಸಿದ ನೂರಾರು ಭಕ್ತರು ದೇವರ ದರ್ಶನ ಪಡೆದರು. ಇದೇ ವೇಳೆ ಚಿಕ್ಕಬಳ್ಳಾಪುರದಿಂದ ಬಾರ್ಲಹಳ್ಳಿವರೆಗೆ ಭಕ್ತಾದಿಗಳು ಉಚಿತ ಬಸ್ ವ್ಯವಸ್ಥೆ ಮಾಡಿದ್ದರು.ಅನ್ನ ಸಂತರ್ಪಣೆಯೂ ನಡೆಯಿತು.