ದಿಲ್ಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಈ ಜಿಲ್ಲೆಯಿಂದ ಎಂಟು ಜನರು ಪಾಲ್ಗೊಂಡಿದ್ದರು ಎಂದು ಎಸ್ ಪಿ ತಿಳಿಸಿದ್ದಾರೆ. ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಹೇಳಿಕೆ ನೀಡಿದ್ದು, ದೆಹಲಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ದಾಂಡೇಲಿ, ಕುಮಟಾ ಮತ್ತು ಹೊನ್ನಾವರ ತಾಲೂಕುಗಳಿಂದ ಒಟ್ಟು ಎಂಟು ಜನರು ಭಾಗವಹಿಸಿದ್ದರು. ಇವರೆಲ್ಲರನ್ನು ಈಗಾಗಲೇ ಪತ್ತೆ ಹಚ್ಚಲಾಗಿದ್ದು, ಅವರೆಲ್ಲರನ್ನೂ ಹೋಮ್ ಕೊರಂಟೈನ್ನಲ್ಲಿರುವಂತೆ ಸೂಚನೆ ನೀಡಲಾಗಿದೆ ಎಂದರು. ಹಳಿಯಾಳದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಾಮೂಹಿಕ