ಪೊಲೀಸ್ ಅಧಿಕಾರಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ನೇರವಾಗಿ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿ, ನಿಮ್ಮ ಹೆಸರಲ್ಲಿ ಜಿಲ್ಲಾ ಬಂದ್ಗೆ ಕರೆ ನೀಡುತ್ತೇನೆ. ಏನು ಮಾಡುತ್ತಿರೋ ಮಾಡಿ ಎಂದು ಗುಡುಗಿದ್ದಾರೆ. ಪೊಲೀಸ್ ಅಧಿಕಾರಿ ಸಮಜಾಯಿಷಿ ನೀಡಲು ಪ್ರಯತ್ನಿಸಿದರೂ ಅದಕ್ಕೆ ಕ್ಯಾರೆ ಎನ್ನದ ಸಂಸದ ಕಟೀಲ್ ತಮ್ಮ ದರ್ಪದ