ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ ಅವರು ಆದಾಯ ತೆರಿಗೆ ಇಲಾಖೆಯಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಪುತ್ರಿಯ ಅದ್ದೂರಿ ವಿವಾಹ ಸಮಾರಂಭಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರ ಬಳಿ ದುಡ್ಡು ಎಲ್ಲಿಂದ ಬಂತು? ವಿವಾಹ ನಡೆಯುವ ಸ್ಥಳಕ್ಕೆ ಆದಾಯ ತೆರೆಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ ಒತ್ತಾಯಿಸಿದ್ದಾರೆ. ಗಣಿಧಣಿ ಎಂದೇ ಖ್ಯಾತರಾದ ಜನಾರ್ಧನ