ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ಗಲಾಟೆ ಮಾಡಿದ ಹಿನ್ನೆಲೆಯಲ್ಲಿ 38 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮೊದಲ ಆರೋಪಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಎರಡನೇ ಆರೋಪಿ ಅಮರೇಶ ಕರಡಿ ಮತ್ತು ಮೂರನೇ ಆರೋಪಿ ಬಿಜೆಪಿಯ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ. ಚಂದ್ರಶೇಖರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿ ಹಾಗೂ ಅವಾಚ್ಯ ಶಬ್ದದಿಂದ ನಿಂದನೆ, ಅಕ್ರಮಕೂಟ ರಚನೆ