180 ಕೋಟಿ ರು. ವೆಚ್ಚ ಮಾಡಿ ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯ ಮೂಲಪ್ರತಿ ಕಾಣೆಯಾಗಲು ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.ಈ ಸಂಬಂಧ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಗೆ ಪತ್ರ ಬರೆದಿರುವ ಅವರುಈ ಕೂಡಲೇ ವರದಿ ನೈಜತೆಯ ಬಗ್ಗೆ ತನಿಖೆ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.