ಬೆಂಗಳೂರು : ಜೆಡಿಎಸ್ ಜಾತ್ಯಾತೀತ ಅಲ್ಲ, ಜಾತಿ ತಿಥಿ ಪಕ್ಷ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಜೆಡಿಎಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಡಿಎಸ್ ನವರು ಒಕ್ಕಲಿಗರನ್ನು ಗುತ್ತಿಗೆ ತೆಗೆದುಕೊಂಡಿದ್ದಾರಾ? ಸಾಕಷ್ಟು ಒಕ್ಕಲಿಗ ನಾಯಕರು ಬಂದು ಹೋಗಿದ್ದಾರೆ. ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಅವರಿಗಿಂತ ದೊಡ್ಡ ಒಕ್ಕಲಿಗ ನಾಯಕರನ್ನು ರಾಜ್ಯ ಕಂಡಿಲ್ಲ. ಅವರು ಒಂದು ದಿನವೂ ಜಾತಿ ರಾಜಕಾರಣ ಮಾಡಿಲ್ಲ. ಎಸ್.ಎಂ.ಕೃಷ್ಣ