ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಡೆದ ಉಭಯ ರಾಜ್ಯಗಳ ಸಂಧಾನ ವಿಫಲವಾಗಿದೆ. ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ದೆಹಲಿಯ ಶ್ರಮಶಕ್ತಿ ಭವನದಲ್ಲಿ ನಡೆದ ಕಾವೇರಿ ಬಿಕ್ಕಟ್ಟಿನ ಸಂಧಾನ ಸಭೆ ನಿರೀಕ್ಷೆಯಂತೆಯೇ ವಿಫಲವಾಗಿದೆ. ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ತಮಿಳುನಾಡು ಪಟ್ಟು ಹಿಡಿದಿದ್ದು, ಉಭಯ ರಾಜ್ಯಗಳಲ್ಲಿ ನೀರಿನ ಲಭ್ಯತೆ ಕುರಿತು ಪರಿಶೀಲನೆ ನಡೆಸಲು ತಜ್ಞರ ತಂಡ ರಚಿಸಲು ಕರ್ನಾಟಕ ಪಟ್ಟು ಹಿಡಿದಿದೆ.