ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆಯ ಆದೇಶವೇ ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಅಂತರ ರಾಜ್ಯ ಜಲ ವಿವಾದಕ್ಕೆ ಸಂಬಂಧಿಸಿದಂತೆ ನಿರ್ವಹಣಾ ಮಂಡಳಿ ರಚನೆ ಆದೇಶ ಶಾಸಕಾಂಗದ ಹಕ್ಕು. ಮಂಡಳಿ ರಚನೆಯ ಬಳಿಕ ಸದಸ್ಯರ ಹೆಸರುಗಳನ್ನು ಕಳುಹಿಸಬೇಕು. ಆದರೆ, ಮೊದಲೇ ಸದಸ್ಯರ ಹೆಸರುಗಳನ್ನು ಕಳುಹಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಎಲ್ಲ ಅಂಶಗಳನ್ನು ನ್ಯಾಯಾಲಯಕ್ಕೆ ಮನವರಿಕೆ