ಇತ್ತೀಚೆಗೆ ನಡೆದ ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಸರ್ಕಾರ ಒಪ್ಪಿಕೊಂಡು ತನಿಖೆ ನಡೆಸುತ್ತಿದೆ. ಪ್ರಕರಣವನ್ನು ಆಳವಾಗಿ ನೋಡಿದಾಗ ಈ ಅಕ್ರಮದಲ್ಲಿ ಈ ಶೇ. 40 ಸರ್ಕಾರ ಭಾಗಿಯಾಗಿರುವುದು ಸ್ಪಷ್ಟವಾಗುತ್ತದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.