ಹಿಂದೂ ಸಂಘಟನೆಯ ಕಾರ್ಯಕರ್ತ ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಪರಪ್ಪನ ಅಗ್ರಹಾರ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಅನಗತ್ಯ ಆರೋಪಗಳನ್ನು ಮಾಡುತ್ತಿದೆ. ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪ್ರಕರಣದಲ್ಲೂ ಬಿಜೆಪಿ ಹೀಗೆ ಮಾಡಿತ್ತು. ಕೊನೆಗೆ ಸಿಬಿಐ ಸಹ ಕ್ಲೀನ್ ಚಿಟ್ ನೀಡಿದೆ ಎಂದು