ಬೆಂಗಳೂರು(ಆ.04): ಸಿಬಿಎಸ್ಇ 10ನೇ ತರಗತಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ರಾಜ್ಯದಲ್ಲಿ ಪರೀಕ್ಷೆ ಬರೆದವರಲ್ಲಿ ಶೇ.99.96 ರಷ್ಟುವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಈ ಬಾರಿ ಕರ್ನಾಟಕದಲ್ಲಿ 10ನೇ ತರಗತಿ ಬರೆದ ಒಟ್ಟು 62,529 ಮಕ್ಕಳ ಪೈಕಿ 62,503 ವಿದ್ಯಾರ್ಥಿಗಳಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿನಿಯರು ಫಲಿತಾಂಶದಲ್ಲಿ ಕೊಂಚ ಮೇಲುಗೈ ಸಾಧಿಸಿದ್ದಾರೆ. 34,856 ಹುಡುಗರಲ್ಲಿ 34,838 (ಶೇ.99.95) ಮಂದಿ ಪಾಸಾಗಿದ್ದರೆ, 27,673 ಮಂದಿ ವಿದ್ಯಾರ್ಥಿನಿಯರಲ್ಲಿ 27,665 (ಶೇ.99.97) ಮಂದಿ ತೇರ್ಗಡೆ ಹೊಂದಿದ್ದಾರೆ ಎಂದು ಸಿಬಿಎಸ್ಇ ಪ್ರಕಟಣೆಯಲ್ಲಿ ತಿಳಿಸಿದೆ. ಕೋವಿಡ್