ರಾಜ್ಯ, ಹೊರರಾಜ್ಯದ ವಿವಿಧ ಯೂನಿವರ್ಸಿಟಿಗಳ ವಿವಿಧ ಕೋರ್ಸುಗಳ ನಕಲಿ ಅಂಕಪಟ್ಟಿ ನೀಡುತ್ತಿದ್ದ ಐದು ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಜುಕೇಶನ್ ಕನ್ಸಲ್ಟೆನ್ಸಿ ಹೆಸರಿನಲ್ಲಿ ನಕಲಿ ಅಂಕಪಟ್ಟಿ ನೀಡುತ್ತಿದ್ದ ರಾಜಾಜಿ ನಗರದ ಕ್ವೆಸ್ಟ್ ಟೆಕ್ನಾಲಜೀಸ್, ಜೆ.ಪಿ.ನಗರದ ಸಿಸ್ಟಂ ಕ್ವೆಸ್ಟ್, ಭದ್ರಪ್ಪ ಲೇಔಟಿನ ಆರೋಹಿ ಇನ್ಸ್ಟಿಟ್ಯೂಟ್, ದಾಸರಹಳ್ಳಿಯ ವಿಶ್ವಜ್ಯೋತಿ ಕಾಲೇಜ್ ಹಾಗೂ ವಿಜಯನಗರದ ಬೆನಕಾ ಕರೆಸ್ಪಾಡೆನ್ಸ್ ಕಾಲೇಜ್ ಮೇಲೆ ದಾಳಿ ನಡೆಸಲಾಗಿದ್ದು ವಿಕಾಸ್ ಭಾಗವತ್ ಎಂಬಾತನನ್ನ ಬಂಧಿಸಲಾಗಿದೆ. ಈ ಹಿಂದೆ