ಪ್ರತಿಷ್ಠಿತ ಬ್ರಾಂಡ್ ಹೆಸರನ್ನ ನಕಲಿ ಮಾಡಿ ಬಟ್ಟೆ ಮಾರುತ್ತಿದ್ದ ಗೋಡೌನ್ ಮೇಲೆ ಸಿಸಿಬಿ ದಾಳಿ ನಡೆಸಿದೆ. ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಬಟ್ಟೆಗಳನ್ನು ಸಿಸಿಬಿ ಜಪ್ತಿ ಮಾಡಿದೆ.