ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಗೆಲುವನ್ನು ಬೆಂಗಳೂರಿನ ಎಎಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಕುಮಾರ ಪಾರ್ಕ್ ಪಶ್ಚಿಮದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಸಿಹಿ ಹಂಚಿ, ನಂತರ ಅಲ್ಲಿಂದ ಬಿಬಿಎಂಪಿ ಕಚೇರಿಗೆ ಬೈಕ್ ರ್ಯಾ ಲಿ ನಡೆಸುವ ಮೂಲಕ ವಿಜಯೋತ್ಸವ ಆಚರಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ಸಾಧನೆಗಳನ್ನು ಕಣ್ಣಾರೆ ಕಂಡಿದ್ದರಿಂದ