ನಟ ಹಾಗೂ ಕೇಂದ್ರ ಮಾಜಿ ಸಚಿವ ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳು ಶೋಕಾಚರಣೆ ಜಾರಿಯಲ್ಲಿದೆ. ಈ ನಡುವೆ ಬಿಜೆಪಿ ಶಾಸಕರೊಬ್ಬರು ಸಂಭ್ರಮಾಚರಣೆ ಮಾಡಿಕೊಳ್ಳುತ್ತಿದ್ದಾರೆ.ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರವೀಂದ್ರನಾಥ ಜನ್ಮದಿನಾಚರಣೆಯನ್ನು ಸಡಗರದಿಂದ ಆಚರಿಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಇದೆ. ಈ ಮಧ್ಯ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಬಿಜೆಪಿ ಶಾಸಕರ ನಡೆ ಸಾರ್ವಜನಿಕರ ಟೀಕೆಗೆ ಗುರಿಯಾಗುತ್ತಿದೆ.ಹುಟ್ಟುರು ಶಿರಮಗೊಂಡನಹಳ್ಳಿಯಲ್ಲಿ 73 ನೇ ಹುಟ್ಟುಹಬ್ಬ ಆಚರಿಸಿಕೊಂಡ ಶಾಸಕ