ಬೆಂಗಳೂರು : ಕಾವೇರಿ ನೀರು ವಿಚಾರವಾಗಿ ಸುಪ್ರೀಂಕೋರ್ಟ್ಗೆ ಮತ್ತೆ ಅರ್ಜಿ ಸಲ್ಲಿಕೆ ಮಾಡುತ್ತೇವೆ ಎಂದು ಜಲ ಸಂಪನ್ಮೂಲ ಸಚಿವ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ ನೀರಾವರಿ ಬೋರ್ಡ್ ಸಭೆ ಸಂಬಂಧ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಳೆಯಿಲ್ಲದೆ ದೊಡ್ಡ ಕಷ್ಟ ಆಗಿದೆ. 180 ಕ್ಕೂ ಹೆಚ್ಚು ತಾಲೂಕುಗಳನ್ನು ಬರ ತಾಲೂಕು ಎಂದು ಘೋಷಣೆ ಮಾಡಿದ್ದೇವೆ. ಇವತ್ತು ಕಾವೇರಿ ಬೋರ್ಡ್ ಸಭೆ ಇದೆ. ಬೋರ್ಡ್ ಮುಂದೆ ವಾಸ್ತವಿಕ ಅಂಶ ತಿಳಿಸುತ್ತೇವೆ