ಮೇಕೆ ದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ತನ್ನ ವಾದವನ್ನು ಮಂಡಿಸಿದ್ದು, ಡಿಪಿಆರ್ ಅನುಮೋದನೆಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣೆಗೆರೆಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದಲ್ಲಿ ಈ ಬಗ್ಗೆ ಯಾವುದೇ ತಡೆಯಾಜ್ಞೆ ಇಲ್ಲ. ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಿಷಯ ಈಗಾಗಲೇ ಶಿಫಾರಸ್ಸು ಆಗಿ , 15 ಸಭೆಗಳಾಗಿವೆ. ಪ್ರಾಧಿಕಾರಕ್ಕಿರುವ ಅಧಿಕಾರದ ವ್ಯಾಪ್ತಿಯಲ್ಲಿ ಮುಂದಿನ ವಾರ ಸಭೆ ಕರೆಯುವ ಸಾಧ್ಯತೆ ಇದೆ. .