ಮಂಡ್ಯ : ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ವೈರಮುಡಿ ಬ್ರಹ್ಮೋತ್ಸವ ಆರಂಭವಾಗಿದೆ.ಕೊರೊನಾ ಕಾರಣಕ್ಕೆ ಎರಡು ವರ್ಷಗಳಿಂದ ಸರಳವಾಗಿ ನಡೆದಿದ್ದ ಉತ್ಸವ ಈ ಬಾರಿ ವಿಜೃಂಭಣೆಯಿಂದ ನೆರವೇರಲಿದೆ. ಈ ಹಿನ್ನೆಲೆ ಇಡೀ ಮೇಲುಕೋಟೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳುಸುತ್ತಿದೆ.ಭೂ ವೈಕುಂಠ ಎಂಬ ಪ್ರಖ್ಯಾತವಾಗಿರುವ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಹಲವು ಪುರಾಣ, ಇತಿಹಾಸಗಳನ್ನು ತನ್ನೊಡಲಲ್ಲಿ ತುಂಬಿಕೊಂಡ ಪ್ರಮುಖ ಧಾರ್ಮಿಕ ಕ್ಷೇತ್ರ. ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೊನಾದಿಂದಾಗಿ