ಬೆಂಗಳೂರು (ಆ. 27): ರಾಜ್ಯದಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಒಟ್ಟು 530 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲು ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿದ್ದು, ಕೋವಿಡ್ ಅನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ. ಆ.28ರಂದು ಜೀವಶಾಸ್ತ್ರ